ಎಲ್.ಬಸವರಾಜು
From Wikipedia
ಡಾ| ಎಲ್.ಬಸವರಾಜು ಇವರು ೧೯೧೯ ಅಕ್ಟೋಬರ ೫ರಂದು ಕೋಲಾರ ಜಿಲ್ಲೆಯ ಎಡಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ವೀರಮ್ಮ ; ತಂದೆ ಲಿಂಗಪ್ಪ.ವೃತ್ತಿಯಿಂದ ಪ್ರಾಧ್ಯಾಪಕರಾದರೂ,ತಮ್ಮ ಜೀವನದ ಬಹುಪಾಲು ಅವಧಿಯನ್ನು ಕನ್ನಡ ಕವಿ,ವೀರಶೈವ ಸಾಹಿತ್ಯ-ಸಿದ್ಧಾಂತಗಳ ಶೋಧನೆ,ಅಧ್ಯಯನ,ವ್ಯಾಖ್ಯಾನ,ಸಂಪಾದನೆಗಳಲ್ಲಿ ಕಳೆದಿದ್ದಾರೆ.ಅಪ್ಪಟ ಮಾನವತಾವಾದಿ.
ಇವರ ಕೆಲವು ಪ್ರಮುಖ ಕೃತಿಗಳು:
- ಶೂನ್ಯ ಸಂಪಾದನೆ
- ಕನ್ನಡ ಛಂದಸ್ಸು
- ಶಿವದಾಸ ಗೀತಾಂಜಲಿ
- ಭಾಸನ ಭಾರತ ರೂಪಕ
- ನಾಟಕಾಮೃತ ಬಿಂದುಗಳು
- ಅಲ್ಲಮನ ವಚನಗಳು
- ದೇವರ ದಾಸೀಮಯ್ಯನ ವಚನಗಳು
- ಭಾಸರಾಮಾಯಣ
- ನಾಟಕ ತ್ರಿವೇಣಿ
ಇವರಿಗೆ 'ಪಂಪ ಪ್ರಶಸ್ತಿ','ಬಸವ ಪುರಸ್ಕಾರ' ವಲ್ಲದೆ ೧೯೯೪ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೦೬ರ 'ಭಾಷಾ ಸಮ್ಮಾನ್' ಗೌರವ ದೊರಕಿದೆ.